Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಇಸ್ರೇಲರ ಮೊರೆಯನ್ನು ಕೇಳಿದ್ದೇನೆ. ಈಜಿಪ್ಟಿನವರು ಅವರಿಗೆ ಕೊಡುವ ಹಿಂಸೆಯನ್ನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:9
22 ತಿಳಿವುಗಳ ಹೋಲಿಕೆ  

ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.


ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,


ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.


ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.


ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು