ವಿಮೋಚನಕಾಂಡ 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು. ಅಧ್ಯಾಯವನ್ನು ನೋಡಿ |