Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:20
14 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.


ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.


ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.


“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು.


ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”


ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.


ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.


ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು