Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸತಕ್ಕದ್ದೇನಂದರೆ - ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕತೈಲವೆಂದು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:31
7 ತಿಳಿವುಗಳ ಹೋಲಿಕೆ  

ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.


ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.


ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.


ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”


ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು