Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:33
27 ತಿಳಿವುಗಳ ಹೋಲಿಕೆ  

ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”


ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.


“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.


ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.


ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.


ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,


ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.


ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.


ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.


ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು