Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:6
16 ತಿಳಿವುಗಳ ಹೋಲಿಕೆ  

ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.


ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.


ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.


“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು