Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:18
17 ತಿಳಿವುಗಳ ಹೋಲಿಕೆ  

ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.


ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.


ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು