ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.
ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.