Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:1
35 ತಿಳಿವುಗಳ ಹೋಲಿಕೆ  

“ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.


ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.


ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?


ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.


ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.


ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.


ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.


ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.


ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?


ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.


ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.


ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು