ವಿಮೋಚನಕಾಂಡ 32:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ. ಅಧ್ಯಾಯವನ್ನು ನೋಡಿ |
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.