ವಿಮೋಚನಕಾಂಡ 32:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.