Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜನರು ಮಾಡಿಸಿಕೊಂಡಿದ್ದ ಬಸವನನ್ನು ಅವನು ಹಿಡಿದು ಬೆಂಕಿಯಿಂದ ಸುಟ್ಟು ಅರೆದು ಪುಡಿಪುಡಿಮಾಡಿ ನೀರಿನ ಮೇಲೆ ಚೆಲ್ಲಿ ಇಸ್ರಾಯೇಲ್ಯರಿಗೆ ಆ ನೀರನ್ನು ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:20
10 ತಿಳಿವುಗಳ ಹೋಲಿಕೆ  

ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,


ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.


ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು