ವಿಮೋಚನಕಾಂಡ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.