ವಿಮೋಚನಕಾಂಡ 32:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |