Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲಾಗಿ ಯೆಹೋವನು ಮೋಶೆಗೆ - ನೀನು ಬೆಟ್ಟದಿಂದ ಇಳಿದುಹೋಗು; ಐಗುಪ್ತದೇಶದಿಂದ ನೀನು ಕರಕೊಂಡು ಬಂದ ನಿನ್ನ ಜನರು ಕೆಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:7
17 ತಿಳಿವುಗಳ ಹೋಲಿಕೆ  

ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.


ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ನೀವು ಸ್ತ್ರೀಪುರುಷರ ರೂಪವನ್ನಾಗಲಿ,


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.


ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.


ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.


ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು