ವಿಮೋಚನಕಾಂಡ 33:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು. ಅಧ್ಯಾಯವನ್ನು ನೋಡಿ |