ವಿಮೋಚನಕಾಂಡ 33:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿ |