Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯು ಆತನಿಗೆ, “ನಿನ್ನ ಪ್ರಸನ್ನತೆಯು ನಮ್ಮ ಸಂಗಡ ಬಾರದೇ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮೋಶೆ: “ನೀವೇ ನಮ್ಮ ಸಂಗಡ ಬಾರದೆ ಹೋದರೆ ನಮ್ಮನ್ನು ಇಲ್ಲಿಂದ ಕಳುಹಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಮೋಶೆ - ನೀನೇ ನಮ್ಮಸಂಗಡ ಬಾರದೆ ಹೋದರೆ ನಮ್ಮನ್ನು ಇಲ್ಲಿಂದ ಹೋಗಗೊಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆ ಯೆಹೋವನಿಗೆ, “ನೀನು ನಮ್ಮೊಂದಿಗೆ ಬರದಿದ್ದರೆ, ಈ ಸ್ಥಳದಿಂದ ನಮ್ಮನ್ನು ಕಳುಹಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ಅವರಿಗೆ, “ನಿಮ್ಮ ಪ್ರಸನ್ನತೆಯು ನಮ್ಮೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:15
7 ತಿಳಿವುಗಳ ಹೋಲಿಕೆ  

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.


“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು