Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದು ಹಾಲೂ ಜೇನೂ ಹರಿಯುವ ದೇಶವೇ. ಆದರೆ ನಾನೇ ನಿಮ್ಮ ಸಂಗಡ ಬರುವದಿಲ್ಲ; ನೀವು ನನ್ನ ಆಜ್ಞೆಗೆ ಬೊಗ್ಗದವರಾದ್ದರಿಂದ ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:3
33 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.


“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.


ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?


ನಾನು ಇವರಿಗೆ ವ್ಯಾಧಿಯನ್ನು ಉಂಟುಮಾಡಿ ಇವರನ್ನು ನಿರ್ಮೂಲಮಾಡುವೆನು. ಈ ಜನರಿಗಿಂತ ನಿನ್ನನ್ನು ದೊಡ್ಡದಾಗಿಯೂ, ಬಲಿಷ್ಠವಾಗಿಯೂ ಇರುವ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.


ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.


ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು