Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:4
20 ತಿಳಿವುಗಳ ಹೋಲಿಕೆ  

ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.


“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.


ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.


ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.


ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು