ವಿಮೋಚನಕಾಂಡ 33:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೋಶೆ ಡೇರೆಯನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿಸುತ್ತಿದ್ದನು. ಅದಕ್ಕೆ ದೇವದರ್ಶನದ ಡೇರೆ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರು ಪಾಳೆಯದ ಹೊರಗಿದ್ದ ದೇವದರ್ಶನದ ಡೇರೆಗೆ ಹೋಗುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ” ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು. ಅಧ್ಯಾಯವನ್ನು ನೋಡಿ |