Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:10
28 ತಿಳಿವುಗಳ ಹೋಲಿಕೆ  

ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.


ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಆಳ್ವಿಕೆ ನರರಲ್ಲಿ ಭಯ ಹುಟ್ಟಿಸತಕ್ಕದ್ದಾಗಿದೆ.


ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.


ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.


ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.


ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.


ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!


ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.


ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.


ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.


ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು