ವಿಮೋಚನಕಾಂಡ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 [ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.