Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನಿಮಗಾಗಿ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:17
14 ತಿಳಿವುಗಳ ಹೋಲಿಕೆ  

“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ


ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು