Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:24
19 ತಿಳಿವುಗಳ ಹೋಲಿಕೆ  

ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.


ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.


ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


“‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು