Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:28
16 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.


ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.


ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದು, ಅವುಗಳಲ್ಲಿ ಕೆತ್ತಿದ ಅಕ್ಷರಗಳು ದೇವರೇ ಬರೆದದ್ದಾಗಿತ್ತು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.


ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.


ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ


ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು