Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರೂ ನಿನ್ನ ಜೊತೆಯಲ್ಲಿ ಬೆಟ್ಟದ ಮೇಲಕ್ಕೆ ಬರಬಾರದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಬಳಿಯಲ್ಲಿ ಮೇಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು. ದನಕುರಿಗಳೂ ಈ ಬೆಟ್ಟದ ಮುಂದೆ ಮೇಯಕೂಡದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಪ್ರದೇಶದಲ್ಲಿ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಮುಂದೆ ಮೇಯಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:3
5 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.


ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.


ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.


ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾ ಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಬಾರದು. ಹಾಗೆ ತನಗಾಗಿಯೂ, ತನ್ನ ಮನೆತನದವರಿಗಾಗಿಯೂ ಮತ್ತು ಇಸ್ರಾಯೇಲರ ಎಲ್ಲಾ ಜನಸಮೂಹಕ್ಕಾಗಿಯೂ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು