ವಿಮೋಚನಕಾಂಡ 34:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮೋಶೆಯ ಮುಖವು ಪ್ರಕಾಶಮಾನವಾಗಿರುವದನ್ನು ಇಸ್ರಾಯೇಲ್ಯರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತಾಡುವದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ತಿರಿಗಿ ಹಾಕಿಕೊಂಡಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿದ್ದುದನ್ನು ಜನರು ನೋಡಿದರು. ಆದ್ದರಿಂದ ಮೋಶೆಯು ಮುಂದಿನ ಸಾರಿ ಯೆಹೋವನೊಡನೆ ಮಾತಾಡಲು ಹೋಗುವವರೆಗೆ ತನ್ನ ಮುಖಕ್ಕೆ ಮುಸುಕು ಹಾಕಿಕೊಂಡಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಮೋಶೆಯ ಮುಖವು ಪ್ರಕಾಶಿಸುವುದನ್ನು ಇಸ್ರಾಯೇಲರು ನೋಡಿದ್ದರು. ಮೋಶೆ ದೇವರ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ಅವನು ತನ್ನ ಮುಖದ ಮೇಲೆ ತಿರುಗಿ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿ |