Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:9
23 ತಿಳಿವುಗಳ ಹೋಲಿಕೆ  

ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ


ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು