Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೃದಯ ಪ್ರೇರಣೆ ಹೊಂದಿದವರೂ ಸಿದ್ಧಮನಸ್ಸಿನವರೂ ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:21
28 ತಿಳಿವುಗಳ ಹೋಲಿಕೆ  

“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ಬುದ್ಧಿವಂತೆಯರಾದ ಬೇರೆ ಸ್ತ್ರೀಯರು ಆಡಿನ ಕೂದಲುಗಳನ್ನು ನೇಯ್ದು ತಂದುಕೊಟ್ಟರು.


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೊಸ್ಕರ ನನ್ನ ಸ್ವಂತ ಸೊತ್ತಿನಿಂದ


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.


‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’


ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.


“ಅರಸರೇ, ಕೇಳಿರಿ! ಪ್ರಭುಗಳೇ, ಕಿವಿಗೊಡಿರಿ! ನಾನು ಯೆಹೋವನನ್ನು ಕೀರ್ತಿಸುವೆನು; ನಾನು ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತುತಿ ಗೀತೆ ಹಾಡುವೆನು.


ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು.


ರತ್ನಗಳನ್ನು ಹೊಂದಿದ್ದವರು ಅವುಗಳನ್ನು ಯೆಹೋವನ ಆಲಯದ ಭಂಡಾರಕ್ಕೋಸ್ಕರ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.


ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು