Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮನಿಮ್ಮೊಳಗೆ ಯೆಹೋವನಿಗೆ ಕಾಣಿಕೆಯನ್ನು ಎತ್ತಿ ಕೊಡಬೇಕು; ಮನಃಪೂರ್ವಕವಾಗಿ ಕಾಣಿಕೆಯನ್ನು ಕೊಡುವವರೇ ತರಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕಂದರೆ - ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:5
13 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಮೋಶೆಯು ಇಸ್ರಾಯೇಲ್ಯರ ಸರ್ವಸಮೂಹಕ್ಕೆ ಹೀಗೆಂದನು: “ಯೆಹೋವನು ಆಜ್ಞಾಪಿಸಿದ್ದೇನೆಂದರೆ,


ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,


ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,


ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು