Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಚಲೇಲನೂ ಒಹೊಲೀಯಾಬನೂ ಎಲ್ಲವನ್ನು ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮಾಡುವರು; ಮತ್ತು ಬೇರೆ ಜಾಣರೆಲ್ಲರು, ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೋಸ್ಕರ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:1
19 ತಿಳಿವುಗಳ ಹೋಲಿಕೆ  

ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.


“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ, ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.


ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.


ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು