ವಿಮೋಚನಕಾಂಡ 36:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಕೆಲಸದವರಲ್ಲಿದ್ದ ಜಾಣರೆಲ್ಲರು ಹೊಸೆದ ನಾರಿನ ಹತ್ತುತಾನು ಬಟ್ಟೆಗಳಿಂದ ಗುಡಾರವನ್ನು ಮಾಡಿ ಆ ಬಟ್ಟೆಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |