ವಿಮೋಚನಕಾಂಡ 37:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿಸಿದನು. ಅದು ಒಂದು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯು ಇದ್ದು ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನು ಜಾಲೀಮರದಿಂದ ಧೂಪವೇದಿಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನು ಧೂಪವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಧೂಪವೇದಿಕೆಯು ಚೌಕವಾಗಿತ್ತು. ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಎರಡು ಮೊಳ ಎತ್ತರ ಇತ್ತು. ಧೂಪವೇದಿಕೆಯಲ್ಲಿ ನಾಲ್ಕು ಕೊಂಬುಗಳಿದ್ದವು. ಪ್ರತಿ ಮೂಲೆಯಲ್ಲಿಯೂ ಒಂದೊಂದು ಕೊಂಬುಗಳಿದ್ದವು. ಈ ಕೊಂಬುಗಳು ಒಟ್ಟಾಗಿ ಧೂಪವೇದಿಕೆಗೆ ಜೋಡಿಸಲ್ಪಟ್ಟು ಅವಿಭಾಜ್ಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು. ಅಧ್ಯಾಯವನ್ನು ನೋಡಿ |