Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:7
6 ತಿಳಿವುಗಳ ಹೋಲಿಕೆ  

ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.


ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು