ವಿಮೋಚನಕಾಂಡ 37:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.
9 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.