ವಿಮೋಚನಕಾಂಡ 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದ ಇಪ್ಪತ್ತು ಮೊಳವಾಗಿತ್ತು; ಅದರ ಅಗಲ ಅಂಗಳದ ಮಿಕ್ಕ ತೆರೆಗಳಂತೆ ಐದು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ವಿುಕ್ಕ ತೆರೆಗಳಂತೆ ಐದು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ ಮಾಡಲಾಗಿತ್ತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು. ಅಗಲ, ಎತ್ತರಗಳಲ್ಲಿ ಅಂಗಳದ ಉಳಿದ ಪರದೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು. ಅಧ್ಯಾಯವನ್ನು ನೋಡಿ |