ವಿಮೋಚನಕಾಂಡ 38:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದೇವಮಂದಿರದ ವಿವಿಧ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರದ ತೂಕ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು ಒಂದು ಸಾವಿರ ಕಿಲೋಗ್ರಾಂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದೇವ ಮಂದಿರದ ಸಕಲವಿಧವಾದ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಭತ್ತು ತಲಾಂತು ಏಳು ನೂರಮೂವತ್ತು ಶೆಕೆಲ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು. ಅಧ್ಯಾಯವನ್ನು ನೋಡಿ |
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.