Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:26
12 ತಿಳಿವುಗಳ ಹೋಲಿಕೆ  

ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.


ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.


ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.


ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.


“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.


ದೇವಮಂದಿರದ ಗದ್ದಿಗೆಕಲ್ಲುಗಳನ್ನೂ ಪರದೆಯ ಕಂಬಗಳ ಮೆಟ್ಟುವಕಲ್ಲುಗಳನ್ನೂ ಎರಕಹೊಯ್ಯುವುದರಲ್ಲಿ ಒಂದೊಂದು ಗದ್ದಿಗೆಕಲ್ಲಿಗೆ ಒಂದೊಂದು ತಲಾಂತಿನ ಮೇರೆಗೆ ನೂರು ತಲಾಂತು ಬೆಳ್ಳಿಯು ಉಪಯೋಗಿಸಲಾಯಿತು.


“ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.


ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.


ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.


“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.


ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು