ವಿಮೋಚನಕಾಂಡ 39:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |