Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೆ ಕೆಲಸದ ರೀತಿಯಲ್ಲಿ ಅಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೇಕೆಲಸದ ರೀತಿಯಲ್ಲಿ ಅಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:27
14 ತಿಳಿವುಗಳ ಹೋಲಿಕೆ  

ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.


ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.


ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,


ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.


“ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.


ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು