Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾರಿನಿಂದ ಮಹಾಯಾಜಕನ ಪೇಟವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಪೇಟಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:28
11 ತಿಳಿವುಗಳ ಹೋಲಿಕೆ  

ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.


ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.


ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.


ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,


ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.


ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು