Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:32
24 ತಿಳಿವುಗಳ ಹೋಲಿಕೆ  

ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.


ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.


ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,


ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು