Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಏನಂದರೆ - ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳೆಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳನ್ನೆಲ್ಲಾ ಅವನಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:33
7 ತಿಳಿವುಗಳ ಹೋಲಿಕೆ  

ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.


ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು