Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:41
7 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು.


ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,


ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.


ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.


ತೊಟ್ಟಿಯನ್ನು, ಅದರ ಪೀಠವನ್ನು, ಅಂಗಳದ ತೆರೆಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಯನ್ನು, ಅದರ ಹಗ್ಗಗಳನ್ನು, ಗೂಟಗಳನ್ನು, ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನು,


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲರು ಆ ಕೆಲಸಗಳನ್ನೆಲ್ಲಾ ಮಾಡಿದ್ದರು.


ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು