Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗಬೇಕು; ಇದರಿಂದಲೇ ಆ ಮಹತ್ಕಾರ್ಯಗಳನ್ನು ಮಾಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:17
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಕುಳ್ಳಿರಿಸಿ ಅವರನ್ನು ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಜೊತೆಯಲ್ಲಿ ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.


ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.


“ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು