Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:18
11 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.


ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.


ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.


ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.


ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.


ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.


ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.


ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು