Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:5
27 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.


ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.


ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು


ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,


ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.


ಯೆಹೋವನು ಮೋಶೆಗೆ, “ನಿನ್ನ ಕೈಚಾಚಿ ಅದರ ಬಾಲವನ್ನು ಹಿಡಿ” ಎಂದು ಹೇಳಿದನು. ಅವನು ಅದನ್ನು ಹಿಡಿದ ಕೂಡಲೇ ಅದು ಕೋಲಾಯಿತು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು