ವಿಮೋಚನಕಾಂಡ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಎರಡು ಮಹತ್ಕಾರ್ಯಗಳನ್ನೂ ಅವರು ಮನಸ್ಸಿಗೆ ತೆಗೆದುಕೊಳ್ಳದೆಯೂ ನಿನ್ನ ಮಾತನ್ನು ನಂಬದೆಯೂ ಹೋದರೆ, ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣಗಿದ ನೆಲದಲ್ಲಿ ಸುರಿಯಬೇಕು; ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು. ಅಧ್ಯಾಯವನ್ನು ನೋಡಿ |