Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ನನಗೋಸ್ಕರ ಯಾಜಕರಾಗುವದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:15
15 ತಿಳಿವುಗಳ ಹೋಲಿಕೆ  

ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.


ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”


ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.


ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.


ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು